Showing posts with label ಆದೇಶಗಳು. Show all posts
Showing posts with label ಆದೇಶಗಳು. Show all posts
2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಮಾಹಿತಿ.
 

ಶಾಲೆಯ ಶೈಕ್ಷಣಿಕ ವರ್ಷದ ಮುಕ್ತಾಯ-ಆರಂಭದ ಕಾರ್ಯಗಳು.



 2022-23 ನೇ ಸಾಲಿನ ಮುಕ್ತಾಯ ಹಂತದಲ್ಲಿ ನಿರ್ವಹಿಸಬೇಕಾದ ಅಂಶಗಳು.


 1. ಉಲ್ಲೇಖ-2ರಂತೆ 5 ಮತ್ತು 8ನೇ ತರಗತಿಯ SA-2 ಮೌಲ್ಯಾಂಕನ ಸೇರಿದಂತೆ ಉಳಿದ 1 ರಿಂದ 9ನೇತರಗತಿಗಳ ಫಲಿತಾಂಶವನ್ನು ನಿಗಧಿಪಡಿಸಿದಂತೆ ದಿನಾಂಕ:08.04.2023ರಂದು ಪ್ರಾಥಮಿಕ ಶಾಲಾ ವಿಭಾಗ ಹಾಗೂ ದಿನಾಂಕ:10.04.2023ರಂದು ಪ್ರೌಢ ಶಾಲಾ ಹಂತದಲ್ಲಿಸಮುದಾಯದತ್ತಾ ಶಾಲೆ/ಪೋಷಕರ ಸಭೆ ಕರೆದು ಪ್ರಕಟಣೆ ಮಾಡುವುದು. 

 2. ಶಾಲಾ ಸ್ಥಳೀಯ ರಜೆಗಳಿಗೆ ಸಂಬಂಧಿಸಿದಂತೆ ಶಾಲಾವಾರು ನಿರ್ದಿಷ್ಟಪಡಿಸಿದ ದಿನಾಂಕಗಳನ್ನು  ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವಭಾವಿಯಾಗಿ ಜೂನ್-2023ರ ಮೊದಲನೇ ವಾರದಲ್ಲಿ ಅನುಮೋದನೆ ನೀಡುವುದು. ಅನುಮೋದಿಸಿದ ದಿನಾಂಕಗಳಿಗೆ ಮಾತ್ರ ಸ್ಥಳೀಯ ರಜೆ ನೀಡುವುದು. 

 3. ಉಲ್ಲೇಖ-2ರಲ್ಲಿ ನಿಗಧಿಪಡಿಸಿದಂತೆ 10.04.2023ಕ್ಕೆ ಪ್ರಸಕ್ತ ಶೈಕ್ಷಣಿಕ ಸಾಲು ಮುಕ್ತಾಯವಾಗುತ್ತಿದ್ದು, 1 ರಿಂದ 9ನೇ ತರಗತಿವರೆಗೆ ಮೌಲ್ಯಾಂಕನ ಪರೀಕ್ಷೆಗಳನ್ನು ಪೂರ್ಣಗೊಳಿಸಿದ್ದು, ಅದರ ಮೌಲ್ಯಮಾಪನವನ್ನು ಪೂರ್ಣಗೊಳಿಸಿ ಫಲಿತಾಂಶವನ್ನು ಶೇ 100ಅಂಕಗಳಿಗೆ ಕ್ರೋಢೀಕರಿಸಿ ನಿಯಮಾನುಸಾರ ಗ್ರೇಡ್ ದಾಖಲಿಸಿ SATS ನಲ್ಲಿದಿನಾಂಕ:25.04.2023ರೊಳಗಾಗಿ ಇಂದೀಕರಿಸತಕ್ಕದ್ದು. 

 4.ದಿನಾಂಕ:14.04.2023 ರಂದು ಡಾ|| ಬಿ.ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಹಾಗೂ ಎಸ್.ಡಿ.ಎಂ.ಸಿ/ಖಾಸಗಿ ಶಾಲೆಗಳಲ್ಲಿ ಸಂಬಂಧಿಸಿದ ಆಡಳಿತ ಮಂಡಳಿಯವರು ಮತ್ತು ಮಕ್ಕಳೊಂದಿಗೆ ಉತ್ತಮ ಪೂರ್ವ  ತಯಾರಿಯೊಂದಿಗೆ ಕಡ್ಡಾಯವಾಗಿ ಆಚರಿಸತಕ್ಕದ್ದು. 

 5. 2023-24ನೇ ಸಾಲಿಗೆ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಮೊದಲನೇ ಜೊತೆ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕ ಹಾಗೂ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕಗಳು ಈಗಾಗಲೇ ಸಂಬಂಧಿಸಿದ ತಾಲ್ಲೂಕುಗಳಿಗೆ ಸರಬರಾಜು ಆಗುತ್ತಿದ್ದು, ಇವುಗಳನ್ನು ಮೊದಲನೇ ಹಂತದಲ್ಲಿ ದಿನಾಂಕ: 10.04.2023ರೊಳಗೆ ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಾಯರ  ಮುಖಾಂತರ ಮಕ್ಕಳಿಗೆ ತಲುಪಿಸತಕ್ಕದ್ದು, ತದನಂತರ ಹಂತ ಹಂತವಾಗಿ ಮಕ್ಕಳಿಗೆ ತಲುಪಿಸಿ ಶಾಲಾ ಪ್ರಾರಂಭೋತ್ಸವದಂದು ಸಮವಸ್ತ್ರ ಧರಿಸಿ ಪಠ್ಯಪುಸ್ತಕಗಳೊಂದಿಗೆ ಶಾಲೆಗೆ ಹಾಜರಾಗಲು ಕ್ರಮವಹಿಸುವುದು.

 6.ದಿನಾಂಕ:11.04.2023ರಿಂದ ದಿನಾಂಕ:28.05.2023ರ ವರೆಗೆ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಯಾಗಿರುವುದರಿಂದ ಶಾಲಾ ಮುಖ್ಯಸ್ಥರು ಶಾಲಾ ದಾಸ್ತಾನು ಮತ್ತು ದಾಖಲೆಗಳನ್ನುಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ ಮದ್ಯಾಹ್ನದ ಬಿಸಿಯೂಟದ ಸಾಮಾಗ್ರಿಗಳನ್ನುಸುರಕ್ಷಿತವಾಗಿ ಸಂಗ್ರಹಿಸಿಡುವುದು ಹಾಗೂ ವಿಧಾನ ಸಭಾ ಚುನಾವಣಾ ಕಾರ್ಯಕ್ಕೆ ಮತಗಟ್ಟೆ ಕೇಂದ್ರಗಳನ್ನಾಗಿ ಶಾಲೆಗಳನ್ನು ಬಳಸುವುದರಿಂದ ಸಹಕರಿಸಲು ಸೂಚಿಸಿದೆ. 


2023-24ನೇ ಶೈಕ್ಷಣಿಕ ಸಾಲಿನಲ್ಲಿ ನಿರ್ವಹಿಸಬೇಕಾದ ಅಂಶಗಳು.

 
 1. ಮಕ್ಕಳ ಶಾಲಾ ಪ್ರವೇಶಾತಿಯನ್ನು/ದಾಖಲಾತಿಯನ್ನು ದಿನಾಂಕ:31.05.2023ರಿಂದ ಶಾಲಾ ಪ್ರಾರಂಭೋತ್ಸವದೊಂದಿಗೆ ಆರಂಭಿಸಿ ದಿನಾಂಕ:30.06.2023ರೊಳಗೆ ಮುಕ್ತಾಯಗೊಳಿಸತಕ್ಕದ್ದು .

 2. ಕಳೆದ ಸಾಲುಗಳಲ್ಲಿ ಕೋವಿಡ್-19 ರ ಪ್ರತಿಕೂಲ ಸನ್ನಿವೇಶ ಹಾಗೂ ಕಲಿಕೆಗೆ ಪೂರಕ ವಾತಾವರಣ ಲಭ್ಯವಾಗದ ಮಕ್ಕಳು ನಿರಂತರವಾಗಿ ಶಾಲೆಗೆ ಗೈರು ಹಾಜರಾಗಿರುವುದು ಮತ್ತುಶಾಲೆ ಬಿಟ್ಟ ಮಕ್ಕಳನ್ನು ಕಡ್ಡಾಯವಾಗಿ ಹಾಜರಾತಿ ಅಧಿಕಾರಿ (ಶಿಕ್ಷಣ ಸಂಯೋಜಕರು)ಯೊಂದಿಗೆ ಸಂಪರ್ಕದಲ್ಲಿದ್ದು, ದಾಖಲಾತಿ ಆಂದೋಲನದ ಮುಖಾಂತರ ವ್ಯಾಪಕ ಪ್ರಚಾರಕೈಗೊಂಡು ಶಾಲಾ ಮುಖ್ಯವಾಹಿನಿಗೆ ತರುವುದು. 

 3. ಕ್ರಿಸ್‌ಮಸ್ ರಜೆ ಬೇಡಿಕೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಜಿಲ್ಲಾಉಪನಿರ್ದೇಶಕರು (ಆಡಳಿತ) ರವರಿಗೆ ಸಲ್ಲಿಸಿದಲ್ಲಿ ಈ ಬಗ್ಗೆ ಆಯಾ ಉಪನಿರ್ದೇಶಕರು (ಆಡಳಿತ)ರವರು ಈ ಕುರಿತು ಪರಿಶೀಲಿಸಿ ನಿರ್ಧರಿಸುವುದು. ಸದರಿ ಡಿಸೆಂಬರ್ ಮಾಹೆಯಲ್ಲಿ ನೀಡುವ ಕ್ರಿಸ್ಮಸ್ ರಜಾ ಅವಧಿಯನ್ನು ಅಕ್ಟೋಬರ್ ಮಾಹೆಯ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಿಕೊಳ್ಳಲು  ಕ್ರಮವಹಿಸತಕದ್ದು.

 4. ರಾಜ್ಯ/ಜಿಲ್ಲಾ ಕಛೇರಿಗಳಿಂದ ನಿಯೋಜಿಸಿದ ಜಿಲ್ಲಾ ಮತ್ತು ತಾಲೂಕು ನೋಡಲ್ ಅಧಿಕಾರಿಗಳು,ಕ್ಲಸ್ಟರ್ ಹಂತದ ಸಿ.ಆರ್.ಪಿ ಗಳು ಬ್ಲಾಕ್ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ಮತ್ತು (ಅಭಿವೃದ್ಧಿ) ರವರುಗಳು ತಮ್ಮ ತಮ್ಮ ವ್ಯಾಪ್ತಿಗನುಗುಣವಾಗಿ ಕ್ರಿಯಾಶೀಲ ಮೇಲ್ವಿಚಾರಣೆ ಮತ್ತು ಶೈಕ್ಷಣಿಕ ಉಸ್ತುವಾರಿ ಕ್ರಿಯಾ ಯೋಜನೆಯನ್ನು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಸೂಚಿಸಿದಂತೆ ತಯಾರಿಸಿಕೊಂಡು ಶಾಲೆಗಳ ಪ್ರಾರಂಭ, ಪೂರ್ವ ತಯಾರಿ, ಶಾಲೆಗಳ ಪ್ರಾರಂಭದ ಸಮಯದಲ್ಲಿ ಇರುವ ಶಿಕ್ಷಕರ ಕೊರತೆ ಹಾಗೂ ಇಲಾಖಾ ಪ್ರೋತ್ಸಾಹದಾಯಕ ಯೋಜನೆಗಳಾದ ಮದ್ಯಾಹ್ನ ಉಪಹಾರ ಯೋಜನೆ ,ಸಮವಸ್ತ್ರ, ಪಠ್ಯಪುಸ್ತಕ, ಶೂ ಮತ್ತು ಸಾಕ್ಸ್ ವಿತರಣೆ ಹಾಗೂ ಶಾಲೆಗಳಲ್ಲಿ ಉತ್ತಮ ವಾರ್ಷಿಕ ಕ್ರಿಯಾ ಯೋಜನೆಯೊಂದಿಗೆ ಮಕ್ಕಳ ದಾಖಲಾತಿ ಅಭಿವೃದ್ಧಿಪಡಿಸಲು ಮಿಂಚಿನ ಸಂಚಾರ ಕೈಗೊಂಡು ಉಸ್ತುವಾರಿ ಮಾಡುವುದು.

 5. ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ನಾಡ ಹಬ್ಬವಾದ ಕರ್ನಾಟಕ ರಾಜ್ಯೋತ್ಸವ ಮತ್ತು ಇತರ ಪ್ರಮುಖ ಜಯಂತಿಗಳನ್ನು ಕಡ್ಡಾಯವಾಗಿ ಆಯಾ    ದಿನಗಳಂದು ಗೌರವ ಪೂರ್ವಕವಾಗಿ   ಆಚರಿಸತಕ್ಕದ್ದು. 

 6. ನಿಗಧಿಪಡಿಸಿದ ಶೈಕ್ಷಣಿಕ ಕರ್ತವ್ಯದ ಅವಧಿಗಳು ಕಡಿಮೆಯಾಗದಂತೆ ಮುಷ್ಕರ ಇನ್ನಿತರೆ ಅನಿರೀಕ್ಷಿತ ಕಾರಣಗಳಿಂದಾಗಿ ಶಾಲೆಗೆ ರಜೆ ಘೋಷಣೆಯಾದಲ್ಲಿ ಆ ಅವಧಿಯ ಶಾಲಾ ಕರ್ತವ್ಯದದಿನಗಳನ್ನು ಮುಂದಿನ ರಜಾ ದಿನಗಳಲ್ಲಿ ಪೂರ್ಣದಿನ ಶಾಲೆಗಳನ್ನು ನಡೆಸಿ, ಶಾಲಾ ಕರ್ತವ್ಯದ ದಿನಗಳನ್ನು ಸರಿದೂಗಿಸಿಕೊಳ್ಳಲು ಉಪನಿರ್ದೇಶಕರು/ಕ್ಷೇತ್ರ ಶಿಕ್ಷಣಾಧಿಕಾರಿಗಳುಕ್ರಮವಹಿಸುವುದು.

 7. ಪರೀಕ್ಷಾ ದಿನಗಳು, ಮೌಲ್ಯಾಂಕನ ದಿನಗಳು, ಹಾಗೂ ಪೂರಕ ಶೈಕ್ಷಣಿಕ ಚಟುವಟಿಕೆ ನಡೆಸುವ ದಿನಗಳನ್ನು ಕೂಡ ಶಾಲಾ ಕರ್ತವ್ಯದ ದಿನವೆಂದು ನಿಗದಿತ ಅವಧಿಗಳಲ್ಲಿ ಪರಿಗಣಿಸುವುದು. 

 8. 2023-24ನೇ ಶೈಕ್ಷಣಿಕ ಸಾಲಿಗೆ ವಾರ್ಷಿಕ ಪಠ್ಯವಸ್ತುವನ್ನು ರಾಜ್ಯಾದ್ಯಂತ ಏಕರೂಪದಲ್ಲಿ ಅಳಡಿಸಿಕೊಳ್ಳಲು ಸಲಹಾತ್ಮಕವಾಗಿ ಮಾಹವಾರು, ಪಾಠ ಹಂಚಿಕೆ ಮಾಡಿ, ನಿಗಧಿಪಡಿಸಿದ್ದು,ಅದರಂತೆ FA-1 FA-2 FA-3 FA-4 ಮತ್ತು SA-1 SA-2 ಪರೀಕ್ಷೆಗಳನ್ನು ನಿಗಧಿಪಡಿಸಿದಪಠ್ಯವಸ್ತುಗನುಗುಣವಾಗಿ ನಿರ್ವಹಿಸತಕ್ಕದ್ದು. 

 9. ಸದರಿ ಸುತ್ತೋಲೆಯೊಂದಿಗೆ 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನುಸಿದ್ಧಪಡಿಸಿ ಅನುಬಂಧ-1ರಲ್ಲಿ ಪೂರೈಸಿದೆ. ಅದರಂತೆ ಶಾಲಾ/ಕ್ಲಸ್ಟರ್/ತಾಲ್ಲೂಕು ಹಾಗೂ ಜಿಲ್ಲಾ ಹಂತಗಳಲ್ಲಿ ಕ್ರಿಯಾ ಯೋಜನೆ ರೂಪಿಸಿಕೊಂಡು ಅನುಪಾಲನೆ ಮಾಡತಕ್ಕದ್ದು. 

 10. ಕಳೆದ ಸಾಲಿನಲ್ಲಿ 5 ಮತ್ತು 8ನೇ ತರಗತಿಗಳಿಗೆ SA-2 ಮೌಲ್ಯಂಕನಾ ನಿರ್ವಹಿಸಿದ್ದು, ಪ್ರಸ್ತುತ 2023-24ನೇ ಸಾಲಿನ ಪ್ರಕ್ರಿಯೆ ನಿರ್ವಹಣೆ ಕುರಿತು ಪ್ರತ್ಯೇಕವಾಗಿ ಕ್ರಮವಹಿಸಿ ತಿಳಿಸಲಾಗುವುದು.

ರಸ ಪ್ರಶ್ನೆ



        





ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ “ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ (Qult Competition) ಸ್ಪರ್ಧೆಯನ್ನು ಆಯೋಜಿಸಲು ಅನುಮೋದನೆಯಾಗಿರುತ್ತದೆ. ವಿದ್ಯಾರ್ಥಿಗಳಿಗೆ ಈ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಅವರಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ವಿವಿಧ ಇತರ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಹಾಗೂ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಲು ಈ ಕಾರ್ಯಕ್ರಮವು ಪೂರಕವಾಗಿದೆ.     

                 
ಈ ರಸಪ್ರಶ್ನೆಯ ಉದ್ದೇಶಗಳು ಹೀಗಿವೆ :

ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳ ಬಗ್ಗೆ ತಿಳಿಯುವ ಕುತೂಹಲ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವುದು.

ವಿದ್ಯಾರ್ಥಿಗಳಲ್ಲಿ ಚಿಂತಿಸುವ, ವಿಶ್ಲೇಷಿಸುವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು. ಭಾರತವು ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಸಾಧನೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.

ವಿದ್ಯಾರ್ಥಿಗಳನ್ನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ಅವರಲ್ಲಿ ಸ್ಪರ್ಧಾ ಮನೋಭಾವನೆಯನ್ನು ಬೆಳೆಸುವುದು.

ಭಾರತದ ಶ್ರೀಮಂತ ಪರಂಪರೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಅವರಲ್ಲಿ ದೇಶದ ಬಗ್ಗೆ ಹೆಮ್ಮೆ ಹಾಗೂ ದೇಶಪ್ರೇಮ ಬೆಳೆಸುವುದು.

ರಾಷ್ಟ್ರೀಯ ಶಿಕ್ಷಣ ನೀತಿ 2020 ನ್ನು ಕಾರ್ಯಗತಗೊಳಿಸುವಲ್ಲಿ ಕರ್ನಾಟಕವು ಕಾರ್ಯ ಪುವೃತ್ತವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಸೂಚಕಗಳಲ್ಲಿ ಒಂದಾದ ಭಾರತ ಕೇಂದ್ರಿತ ಶಿಕ್ಷಣ ಹಾಗೂ ನಮ್ಮ ಶಾಲಾ ಮಕ್ಕಳಲ್ಲಿ ಭಾರತದ ದೇಶದ ಬಗ್ಗೆ ಹಮ್ಮ, ಸಂಸ್ಕೃತಿ ಪರಂಪರೆಯ ಕುರಿತು ಜಾಗೃತಿ ಮೂಡಿಸುವ ಪ್ರಾಮುಖ್ಯತೆಯನ್ನು ನಿರ್ಧಿಪ್ರವಾಗಿ “ಭಾರತದ ಜ್ಞಾನ” (Knowledge of INDIA ) ಎಂದು ಕರೆಯಲಾಗುತ್ತದೆ. ಭಾರತದ ಸ್ವಾತಂತ್ರದ 75 ವರ್ಷಗಳ ಸಂಭ್ರಮಾಚರಣೆಯ “ಆಜಾದಿ ಕಾ ಅಮೃತ್ ಮಹೋತ್ಸವ ” ಕಾರ್ಯಕ್ರಮದಡಿಯಲ್ಲಿ ಶಾಲೆ, ತಾಲೂಕು, ಜಿಲ್ಲೆ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಯ ಹಂತಗಳು:

ಶಾಲೆ, ತಾಲ್ಲೂಕು, ಜಿಲ್ಲೆ ವಿಭಾಗ ಹಾಗೂ ರಾಜ್ಯ ಹಂತಗಳಲ್ಲಿ ಈ ಸ್ಪರ್ಧೆಯನ್ನು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಓದುತ್ತಿರುವ 5 ರಿಂದ 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ 2 ಹಂತಗಳಲ್ಲಿ ಆಯೋಜಿಸಲಾಗಿದೆ.

  1. ಕಿರಿಯರ ವಿಭಾಗ /ಜೂನಿಯರ್ ವಿಭಾಗ (5ರಿಂದ 7 ತರಗತಿಯ ವಿದ್ಯಾರ್ಥಿಗಳಿಗಾಗಿ)
  2. ಹಿರಿಯರ ವಿಭಾಗ /ಸೀನಿಯರ್ ವಿಭಾಗ (8ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ)

 ಶಾಲಾ ಮಟ್ಟದ ವಿಜೇತ ಮಕ್ಕಳನ್ನು ನೊಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ.

KSOU MYSORE

ಕರಾಮುವಿ: 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿ ಪ್ರಾರಂಭ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭವಾಗಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್‌ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲಾರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು. ಯುಜಿಸಿ ನಿಯಮಾವಳಿ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ. ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ (ಭೌತಿಕ) (Regular) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (Open University) ಇನ್ನೂಂದು ಕೋರ್ಸ್ಅನ್ನು ಏಕಕಾಲದಲ್ಲೇ (ಒಂದೇ ವರ್ಷದಲ್ಲಿ) ಮಾಡಲು ಅವಕಾಶ ಇರುತ್ತದೆ. ವಿವಿಯು ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸಂಪೂರ್ಣ ವಿವರಗಳನ್ನು ಈ ಕೆಳಗಿನಂತೆ ತಿಳಿಸಲಾಗಿದೆ. ವಿವಿಧ ಶೈಕ್ಷಣಿಕ ಕೋರ್ಸ್‌ಗಳು – ಸ್ನಾತಕ ಪದವಿ – ಬಿ.ಎ,- ಬಿ.ಕಾಂ,- ಬಿ.ಬಿ.ಎ (Marketing Management),- ಬಿ.ಸಿ.ಎ,- ಬಿ.ಲಿಬ್.ಐ ಎಸ್ಸಿ., ಬಿ.ಎಸ್ಸಿ (General, Home Science, IT) ಸ್ನಾತಕೋತ್ತರ ಪದವಿ MA ವಿಷಯಗಳು – ಕನ್ನಡ, ಇಂಗ್ಲಿಷ್, ಹಿಂದಿ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಶಿಕ್ಷಣ ಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ, (ಸೆಮಿಸ್ಟರ್ ಪರೀಕ್ಷೆ). ಸಂಸ್ಕೃತ., ಉರ್ದು, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ. (ವಾರ್ಷಿಕ ಪರೀಕ್ಷೆ). ಎಂ.ಕಾಂ, (Dual Specialization – 1.Accounting and Finance/HRM., 2. Marketing Management and HRM/ Finance) ಎಂ.ಬಿ.ಎ ( AICTE Approved) (Specialization – •Finance • HRM • Marketing Management • Operations • Tourism • Corporate Law • Information Technology) -M.Sc ಕೋರ್ಸ್‌ಗಳು – ಜೀವ ರಸಾಯನಶಾಸ್ತ್ರ, ಜೈವಿಕ ತಂತ್ರಜ್ಞಾನ, ರಸಾಯನಶಾಸ್ತ್ರ, ಕ್ಲಿನಿಕಲ್ ನ್ಯೂಟ್ರಿಷನ್ ಅಂಡ್ ಡಯಟೆಟಿಕ್ಸ್, ಪರಿಸರ ವಿಜ್ಞಾನ, ಕಂಪ್ಯೂಟರ್ ವಿಜ್ಞಾನ, ಭೂಗೋಳ ಶಾಸ್ತ್ರ, ಮಾಹಿತಿ ವಿಜ್ಞಾನ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಭೌತಶಾಸ್ತ್ರ, ಮನೋವಿಜ್ಞಾನ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಫುಡ್ ಅಂಡ್ ನ್ಯೂಟ್ರಿಷನ್ ಸೈನ್ಸ್. ಎಂ.ಲಿಬ್‌.ಐ ಎಸ್ಸಿ ಪಿ.ಜಿ ಡಿಪ್ಲೊಮಾ (Graduate Based) ಕಮ್ಯೂನಿಕೇಟಿವ್ ಇಂಗ್ಲಿಷ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಇಂಗ್ಲಿಷ್, ಕುವೆಂಪು ಸಾಹಿತ್ಯ, ವ್ಯವಹಾರಿಕ ಕಾನೂನು, ವ್ಯವಹಾರಿಕ ನಿರ್ವಹಣೆ, ಮಾನವ ಸಂಪನ್ಮೂಲ ನಿರ್ವಹಣೆ, ಹಣಕಾಸು ನಿರ್ವಹಣೆ, ಅಂಬೇಡ್ಕರ್ ಅಧ್ಯಯನ, ಮಾರುಕಟ್ಟೆ ನಿರ್ವಹಣೆ, ಅಂಬೇಡ್ಕರ್ ಅಧ್ಯಯನ, ಮಾರುಕಟ್ಟೆ ನಿರ್ವಹಣಾಶಾಸ್ತ್ರ, ನ್ಯೂಟ್ರಿಷನ್ ಅಂಡ್ ಡಯಟೆಟಿಕ್ಸ್‌ , ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಶನ್. -ಡಿಪ್ಲೊಮಾ- (10+2 Based) ಡಿಪ್ಲೊಮಾ -ಕನ್ನಡ, ಪತ್ರಿಕೋದ್ಯಮ, ನ್ಯೂಟ್ರಿಷನ್ ಅಂಡ್ ಹೆಲ್ತ್ ಎಜುಕೇಷನ್, ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಷನ್. ಅರ್ಲಿ ಚೈಲ್ಡ್ ಕೇರ್ ಅಂಡ್ ಎಚುಕೇಷನ್. -ಸರ್ಟಿಫಿಕೇಟ್ – (10+2 Based) ಕನ್ನಡ, ಪಂಚಾಯತ್ ರಾಜ್, ಮಾಹಿತಿ ಸಂವಹನ ತಂತ್ರಜ್ಞಾನ, ನ್ಯೂಟ್ರಿಷನ್ ಅಂಡ್ ಫುಡ್. ಪ್ರವೇಶಾತಿಗೆ ಸಂಬಂಧಿಸಿದ ಮುಖ್ಯ ದಿನಾಂಕಗಳು ಬಿಎ / ಬಿ.ಕಾಂ / ಬಿ.ಬಿ.ಎ / ಬಿ.ಎಸ್ಸಿ/ ಬಿ.ಸಿ.ಎ/ ಎಂಎ/ಎಂ.ಕಾಂ/ಎಂ.ಎಸ್ಸಿ/ಬಿ.ಲಿಬ್.ಐ.ಎಸ್ಸಿ/ ಎಂ.ಲಿಬ್.ಐ.ಎಸ್ಸಿ / ಡಿಪ್ಲೊಮ / ಪಿಜಿ ಡಿಪ್ಲೊಮ / ಸರ್ಟಿಫಿಕೇಟ್ . B Ed – CET ಮುಖಾಂತರ ಮಾತ್ರ ಪ್ರವೇಶಾತಿ. ಈ ಮೇಲ್ಕಂಡ ಕೋರ್ಸ್ ‍ಗಳ ಪ್ರಥಮ ವರ್ಷದ ಪ್ರವೇಶಾತಿಗೆ ಪ್ರಾರಂಭ ದಿನಾಂಕ- 17/01/2023. ಕೊನೆಯ ದಿನಾಂಕ : 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರಥಮ ವರ್ಷದ ಪ್ರವೇಶಾತಿಗೆ 2023ರ ಮಾರ್ಚ್ 31 ಕೊನೆಯ ದಿನಾಂಕ. ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ:- ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ 15% ಭೋಧನ ಶುಲ್ಕದಲ್ಲಿ ರಿಯಾಯಿತಿ. ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ 15% ಭೋಧನ ಶುಲ್ಕದಲ್ಲಿ ರಿಯಾಯಿತಿ. ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ 30% ಭೋಧನ ಶುಲ್ಕದಲ್ಲಿ ರಿಯಾಯಿತಿ. KSRTC/BMTC/NWKSRTC/KKSRTC ನೌಕರರಿಗೆ 25% ಭೋಧನ ಶುಲ್ಕದಲ್ಲಿ ರಿಯಾಯಿತಿ. ಉಚಿತ ಪ್ರವೇಶಾತಿ:- ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂಸಿಎ ಹೊರತು ಪಡಿಸಿ). ಸೂಚನೆ:- SC/ST/OBC ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು. ಅರ್ಜಿ ಸಲ್ಲಿಕೆ ಹೇಗೆ? ಮೇಲೆ ತಿಳಿಸಿದ ಯಾವುದೇ ಕೋರ್ಸ್‌ಗಳ ಪ್ರವೇಶಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನಂತರ ಕಡ್ಡಾಯವಾಗಿ ನಿಮ್ಮ ಹತ್ತಿರದ ಪ್ರಾದೇಶಿಕ ಕೇಂದ್ರಕ್ಕೆ ಅಥವಾ KSOU ಕೇಂದ್ರ ಕಚೇರಿ ಮೈಸೂರಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ನಂತರ Debt Card/Cradit Card ಮೂಲಕ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆದುಕೋಳ್ಳಬಹುದು.

 

ವಿವಾಹಿತ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನಾ ಸಮಯದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸುವಾಗ ಅವರ ಪತಿಯ ಹೆಸರಿನಲ್ಲಿ ಸಲ್ಲಿಸುವ ಬದಲು ಅವರ ತಂದೆ ಹೆಸರಿನಲ್ಲಿ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸುತ್ತಿರುವ ಬಗ್ಗೆ ನ್ಯಾಯಾಲಯದ ಆಧೇಶ ಪತ್ರಿ.